ನವದೆಹಲಿ: ಜೆಡಿಎಸ್ ನಲ್ಲಿದ್ದ ಎ.ಟಿ ರಾಮಸ್ವಾಮಿ ಅವರು ನಿನ್ನೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಬೆನ್ನಲ್ಲೇ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ದೆಹಲಿಯಲ್ಲಿ ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಹಾಗೂ ಇತರ ಮುಖಂಡರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಬಿಜೆಪಿಯ ಅರಕಲಗೂಡು ಕ್ಷೇತ್ರ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಅನುರಾಗ್ ಸಿಂಗ್ ಠಾಕೂರ್ ಈ ಬಗ್ಗೆ ಮಾತನಾಡಿ, ರಾಮಸ್ವಾಮಿ ಅವರು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ದೇಶದ ಅತಿದೊಡ್ಡ ಪಕ್ಷವನ್ನು ಸೇರಿದ್ದಾರೆ. ಅವರ ಸೇರ್ಪಡೆಯಿಂದ ಬಿಜೆಪಿಗೂ ಶಕ್ತಿ ಸಿಗಲಿದೆ ಎಂದಿದ್ದಾರೆ.










