ಬಿಜೆಪಿ ಸೇರ್ಪಡೆಯಾದ ಮಾಜಿ ಸಂಸದ ಮುದ್ದಹನುಮೇಗೌಡ, ನಟ ಶಶಿಕುಮಾರ್.

51
firstsuddi

ಬೆಂಗಳೂರು : ಮಾಜಿ ಸಂಸದ ಮುದ್ದಹನುಮೇಗೌಡ ಹಾಗೂ ಚಿತ್ರದುರ್ಗದ ಮಾಜಿ ಸಂಸದ, ಜೆಡಿಎಸ್ ನಾಯಕ, ಹಿರಿಯ ಚಿತ್ರನಟ ಶಶಿಕುಮಾರ್ ಅವರು ಬಿಜೆಪಿ ಸೇರ್ಪಡೆಯಾದರು.

ಇಂದು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಶಶಿಕುಮಾರ್, ಮುದ್ದಹನುಮೇಗೌಡ, ಕೆಪಿಸಿಸಿ ಸದಸ್ಯರಾಗಿದ್ದ ವೆಂಕಟಾಚಲ, ಮಾಜಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಮೈಸೂರಿನ ರಮೇಶ್ ಮುನಿಯಪ್ಪ ಬಿಜೆಪಿ ಸೇರ್ಪಡೆ ಆದರು. ಪಕ್ಷದ ಶಾಲು ಹೊದಿಸಿ ನಾಯಕರನ್ನು ಬಿಜೆಪಿಗೆ ಬರಮಾಡಿಕೊಳ್ಳಲಾಯಿತು.

ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಕರ್ನಾಟಕದ ರಾಜಕಾರಣ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್ ವಿಶ್ವಾಸ ಕಳೆದುಕೊಂಡು ಅಧಿಕಾರ ಕಳೆದುಕೊಳ್ಳುತ್ತಿದೆ. ಈಗ ಕಾಂಗ್ರೆಸ್ ಗೆ ಜನಮತ ಇಲ್ಲ. ಆದರೂ ಕಾಂಗ್ರೆಸ್ ಹಿಂಬಾಗಿಲಿಂದ ಅಧಿಕಾರ ಪಡೆದಿತ್ತು. ಆದರೆ ಜೆಡಿಎಸ್ ಜತೆಗಿನ ಸಮ್ಮಿಶ್ರ ಸರ್ಕಾರದ ಪ್ರಯೋಗ ವಿಫಲವಾಯಿತು. ನಂತರ ಬಿಜೆಪಿ ಅಧಿಕಾರಕ್ಕೇರಿ ಜನಮನ್ನಣೆ ಪಡೆದಿದೆ. ಬಿಜೆಪಿ ಪರ ಸಂಪೂರ್ಣ ದಿಕ್ಸೂಚಿ ಕಾಣುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಚಿವ ಎಸ್ ಟಿ ಸೋಮಶೇಖರ್, ಸಚಿವ ಅಶ್ವತ್ಥ ನಾರಾಯಣ, ರಾಜ್ಯಸಭೆ ಸದಸ್ಯ ಜಗ್ಗೇಶ್ ಎಮ್ ಎಲ್ ಸಿಗಳಾದ ಲಕ್ಷ್ಮಣ ಸವದಿ, ಸಿಪಿ ಯೋಗೇಶ್ವರ್, ದೇವೇಗೌಡ, ಶಾಸಕ ಮಸಾಲೆ ಜಯರಾಮ್, ಸಚಿವ ಗೋವಿಂದ್ ಕಾರಜೋಳ ಉಪಸ್ಥಿತರಿದ್ದರು.