ಬೆಂಗಳೂರು: ಬಿಪಿಎಲ್, ಎಪಿಎಲ್ ಕಾರ್ಡ್‍ದಾರರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಆಧಾರ್ ಲಿಂಕ್ ಆಗದ ಬಿಪಿಎಲ್, ಎಪಿಎಲ್ ಕಾರ್ಡ್‍ಗಳನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ರದ್ದುಗೊಳಿಸಿದೆ. ಈಗಾಗಲೇ ಲಕ್ಷಾಂತರ ಜನರ ಎಪಿಎಲ್ ಕಾರ್ಡ್‍ಗಳು ರದ್ದಾಗಿದ್ದು 60 ಸಾವಿರ ಬಿಪಿಎಲ್ ಕಾರ್ಡ್‍ಗಳನ್ನು ಎಪಿಎಲ್‍ಗೆ ಬದಲಾವಣೆ ಮಾಡಲಾಗಿದೆ. ರಾಜ್ಯದಲ್ಲಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‍ಗಳನ್ನು ರದ್ದುಪಡಿಸಿದ ಬೆನ್ನಲ್ಲೇ ಆಹಾರ ಇಲಾಖೆ ಈಗ ಎಪಿಎಲ್ ಕಾರ್ಡ್‍ದಾರರಿಗೂ ಶಾಕ್ ನೀಡಿದೆ. 22 ಲಕ್ಷ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್‍ಗಳನ್ನು ಆಹಾರ ಇಲಾಖೆ ಅಮಾನತು ಮಾಡಿದ್ದು ಸರಿಯಾಗಿ ಕೆವೈಸಿ ಜೋಡಣೆಯಾದ ಬಳಿಕ ಈ ಕಾರ್ಡ್‍ದಾರರಿಗೆ ಅಕ್ಕಿ ಸಿಗಲಿದೆ.










