ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬಿಬಿಎಂಪಿ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಅವರನ್ನು ನಿಯೋಜಿಸಲಾಗಿದೆ.
ಗೌರವ್ ಗುಪ್ತರನ್ನು ಮೂಲಸೌಕರ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಹಾಗೇ ನಿತೇಶ್ ಪಾಟೀಲ್ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ, ಗುರುದತ್ ಹೆಗಡೆ ಅವರನ್ನು ಧಾರವಾಡ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ.
ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರಾಗಿ ಡಾ. ನವೀನ್ ಭಟ್, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಪ್ರಸನ್ನ ಹೆಚ್, ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ ಭೂ ಬಾಲನ್ ಟಿ, ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಎಂಡಿಯಾಗಿ ಭರತ್ ಎಸ್, ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಡಾ.ಗಿರೀಶ್ ದಿಲೀಪ್ ಬಾಡೋಲ್ ಅವರನ್ನು ವರ್ಗಾವಣೆ ಮಾಡಲಾಗಿದೆ.












