ಬಿರ್ಭೂಮ್ ಹಿಂಸಾಚಾರ ಪ್ರಕರಣ : ಅಪರಾಧಿಗಳನ್ನು ಕ್ಷಮಿಸಬೇಡಿ ಎಂದ ಮೋದಿ.

72
firstsuddi

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ನಡೆದ 10 ಮಂದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪಶ್ಚಿಮ ಬಂಗಾಳದ ಬಿರ್ಭೂಮ್ ಹತ್ಯೆಯ ಅಪರಾಧಿಗಳನ್ನು ಯಾವುದೇ ಕಾರಣಕ್ಕೂ ಕ್ಷಮಿಸಬಾರದು ಎಂದಿದ್ದಾರೆ.

ವಿಕ್ಟೋರಿಯಾ ಸ್ಮಾರಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿರುವ ಮೋದಿ, ಬಿರ್ಭೂಮ್ ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಸಂತಾಪವನ್ನು ಸೂಚಿಸುತ್ತಿದ್ದೇನೆ. ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಅಪರಾಧಿಗಳಿಗೆ ಶಿಕ್ಷೆ ವಿಧಿಸುವಲ್ಲಿ ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಾಯ ನೀಡಲು ಸಿದ್ಧವಾಗಿದೆ ಎಂದಿದ್ದಾರೆ.

ಏನಿದು ಪ್ರಕರಣ?: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ರಾಮ್ ಪುರಹಾಟ್ ಎಂಬಲ್ಲಿ ಮಂಗಳವಾರ ನಸುಕಿನಲ್ಲಿ ದುಷ್ಕರ್ಮಿಗಳು ಕೆಲ ಮನೆಗಳಿಗೆ ಬೆಂಕಿ ಹಚ್ಚಿದ್ದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಮೃತಪಟ್ಟಿದ್ದರು.