ಬಿಸಿಸಿಐನ 39ನೇ ಅಧ್ಯಕ್ಷರಾಗಿ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅಧಿಕಾರ ಸ್ವೀಕಾರ…

415
firstsuddi

ಮುಂಬೈ : ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ 39ನೇ ಅಧ್ಯಕ್ಷರಾಗಿ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ಅವರು ಒಬ್ಬರೇ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಮುಂಬೈನ ಬಿಸಿಸಿಐ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಗಂಗೂಲಿ ಅವರನ್ನು ಅವಿರೋಧವಾಗಿ ಘೋಷಣೆ ಮಾಡಲಾಗಿದ್ದು, ಇನ್ನೂ 9ತಿಂಗಳ ಕಾಲ ಸೌರವ್ ಗಂಗೂಲಿ ಅವರು ಬಿಸಿಸಿಐನ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.