ಬಿಹಾರದಲ್ಲಿ ಸರಣಿ ಅಪಘಾತ- ಇಬ್ಬರು ಮಹಿಳೆಯರು ಸೇರಿದಂತೆ 9 ಮಂದಿ ಸಾವು…

39
firstsuddi

ಪಾಟ್ನಾ: ಟ್ರಕ್, ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ಬಿಹಾರದ ಕೈಮೂರ್ ಜಿಲ್ಲೆಯ ದೇವಕಲಿ ಗ್ರಾಮದ ಬಳಿ ನಡೆದಿದೆ.

ಜೀಪ್‍ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 8 ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್‍ಗೆ ಜೀಪ್ ಡಿಕ್ಕಿ ಹೊಡೆದಿದೆ. ಬಳಿಕ ಎದುರಿನಿಂದ ಬರುತ್ತಿದ್ದ ಟ್ರಕ್, ಬೈಕ್ ಮತ್ತು ಜೀಪ್ ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಹಾಗೂ ಜೀಪ್‍ನಲ್ಲಿದ್ದ 8 ಜನ ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ.

ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ ಟ್ರಕ್‍ನ್ನು ವಶಪಡಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.