ಬೀದರ್ : ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಒಂದೇ ಕುಟುಂಬದ ಮೂವರ ಶವಗಳು ಪತ್ತೆ…

63
firstsuddi

ಬೀದರ್ : ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಒಂದೇ ಕುಟುಂಬದ ಮೂವರ ಮೃತದೇಹಗಳು ಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪೂರ್ ಗ್ರಾಮದ ಬಳಿ ಘಟನೆ ನಡೆದಿದ್ದು, ಸುನಂದಾ (45), ಸುಮಿತ್ (11), ಹಾಗೂ ಐಶ್ವರ್ಯ (16) ಮೃತ ದುರ್ದೈವಿಗಳು. ನಿನ್ನೆ ನಾಲ್ವರು ಜಮೀನು ಕೆಲಸಕ್ಕೆ ಹೋಗಿ ಮನೆಗೆ ವಾಪಸಾಗುವಾಗ ಧಾರಾಕಾರ ಅಕಾಲಿಕ ಮಳೆಯಿಂದಾಗಿ ಹಳ್ಳದ ನೀರು ಏಕಾಏಕಿ ಹೆಚ್ಚಾಗಿದೆ. ಈ ವೇಳೆ ನೀರಿನ ರಭಸಕ್ಕೆ ತಾಯಿ ಹಾಗೂ ಇಬ್ಬರು ಮಕ್ಕಳು ಕೊಚ್ಚಿ ಹೋಗಿದ್ದಾರೆ. ಆದರೆ ಸುನಂದಾ ಪತಿ ಈಜಿ ದಡ ಸೇರಿದ್ದಾರೆ.

ನಿನ್ನೆ ಸಂಜೆಯಿಂದ ರಾತ್ರಿವರೆಗೆ ಅಗ್ನಿ ಶಾಮಕದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು. ಆದರೂ ಮೃತದೇಹಗಳು ಪತ್ತೆಯಾಗಿರಲಿಲ್ಲ. ಇಂದು ಬೆಳಗಿನ ಜಾವ ಮತ್ತೆ ಶೋಧ ಕಾರ್ಯ ಮುಂದುವರಿಸಿದಾಗ ಮೂವರ ಮೃತದೇಹಗಳು ಪತ್ತೆಯಾಗಿದೆ. ಘಟನೆಯಾದ ಸ್ಥಳದಿಂದ 1 ಕಿ.ಮೀ ದೂರದಲ್ಲಿ ಮೃತದೇಹಗಳು ಪತ್ತೆಯಾಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಠಾಣಾಕೂಸುನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.