ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯಿಂದ ನಿರಂತರ ಅತ್ಯಾಚಾರ…

49
firstsuddi

ಬೆಳಗಾವಿ: ಜಿಲ್ಲೆಯ ಬೆಳವಟ್ಟಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಬುದ್ಧಿಮಾಂದ್ಯ ಮಗಳ ಮೇಲೆಯೇ ನಿರಂತರ ಅತ್ಯಾಚಾರ ಎಸಗಿ, ಗರ್ಭಿಣಿಯನ್ನಾಗಿಸಿದ ಪ್ರಕರಣ ಮಗು ಜನಿಸಿದ ಬಳಿಕ ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ತಾಯಿ ಕೆಲ ವರ್ಷಗಳ ಹಿಂದೆಯೇ ಮೃತಪಟ್ಟಿದ್ದರಿಂದ, ಮನೆಯಲ್ಲಿ ತಂದೆ ಮತ್ತು ಮಗಳು ಮಾತ್ರ ಇರುತ್ತಿದ್ದರು. ಇಂತಹ ಪರಿಸ್ಥಿತಿಯ ಲಾಭ ಪಡೆದು ಆರೋಪಿ ಮಗಳ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ್ದು, ಆಕೆ ಗರ್ಭಿಣಿಯಾಗಿರುವ ಬಗ್ಗೆ ಸ್ಥಳೀಯರಿಂದ ಅನುಮಾನ ವ್ಯಕ್ತವಾದ ಬಳಿಕ ಗ್ರಾಮದ ಆಶಾ ಕಾರ್ಯಕರ್ತೆಯರ ಮೂಲಕ ತಪಾಸಣೆ ನಡೆಸಿದಾಗ ಗರ್ಭಿಣಿಯಾಗಿರುವ ಮಾಹಿತಿ ದೃಢಪಟ್ಟಿದೆ.

ಸರ್ಕಾರೇತರ ಸಂಸ್ಥೆಯೊಂದು 2023ರ ಫೆಬ್ರವರಿ ತಿಂಗಳಲ್ಲಿ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಬುದ್ಧಿಮಾಂದ್ಯೆಯ ತಂದೆ ಮೇಲೆ ಅನುಮಾನಗೊಂಡು ತಂದೆ ಹಾಗೂ ಆಕೆಗೆ ಜನಿಸಿದ ಮಗುವಿನ ಡಿಎನ್ಎ ಪರೀಕ್ಷಿಸಿದ ಬಳಿಕ ಆತನೇ ಮಗುವಿನ ತಂದೆ ಎನ್ನುವುದು ದೃಢಪಟ್ಟಿದೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.