ಮಂಗಳೂರು : ವಾಮಂಜೂರಿನ ಖಾಸಗಿ ಕಾಲೇಜಿನ ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ್ದಕ್ಕೆ ನಾಲ್ವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.
ಮಂಗಳೂರಿನ ಸೇಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ಸಂಜೆ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ್ದರು. ವಿದ್ಯಾರ್ಥಿಗಳ ಡ್ಯಾನ್ಸ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜು ಆಡಳಿತ ಮಂಡಳಿ ಆಂತರಿಕ ವಿಚಾರಣೆಯ ಬಳಿಕ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ.
ಕಾರ್ಯಕ್ರಮದ ಪ್ರಾರಂಭದಲ್ಲಿ ವಿದ್ಯಾರ್ಥಿಗಳು ಅನುಮತಿ ಇಲ್ಲದೆ ಈ ನೃತ್ಯ ಪ್ರದರ್ಶಿಸಿದ್ದಾರೆ ಎಂದು ಕಾಲೇಜು ಮಂಡಳಿ ಹೇಳಿದೆ. ಕೋಮು ಸೌಹಾರ್ಧತೆ ಕದಡುವ ಯಾವುದೇ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದೆ.










