ನವದೆಹಲಿ: ಬುಲ್ಡೋಜರ್ ನ್ಯಾಯ ಕಾನೂನುಬಾಹಿರ. ಕ್ರಿಮಿನಲ್ ಕೃತ್ಯಗಳು, ಅಪರಾಧಗಳ ಕಾರಣಕ್ಕೆ ಆಸ್ತಿಗಳನ್ನು ಕೆಡವಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ನೀಡಿದ್ದು, ಬುಲ್ಡೋಜರ್ ನ್ಯಾಯ ಅಸಂವಿಧಾನಿಕ ಎಂದು ಹೇಳಿದೆ. ಉತ್ತರ ಪ್ರದೇಶದ ಬುಲ್ಡೋಜರ್ ನ್ಯಾಯದ ಸಾಂವಿಧಾನಿಕ ಸಿಂಧುತ್ವದ ಕುರಿತು ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್, ಕಾಯಾರ್ಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ನ್ಯಾಯದ ಹೆಸರಿನಲ್ಲಿ ಆರೋಪಿಯನ್ನು ಅಪರಾಧಿ ಎಂದು ಘೋಷಿಸಲು ಮತ್ತು ಅವರ ಮನೆಯನ್ನು ಕೆಡುವುದು ಅಸಂವಿಧಾನಿಕ ಎಂದು ತಿಳಿಸಿದೆ. ಬುಲ್ಡೋಜರ್ ಕ್ರಮಕ್ಕೆ ಬ್ರೇಕ್ ಹಾಕುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, ಕಾಯಾರ್ಂಗದ ಪ್ರತಿನಿಧಿಗಳು ಒಬ್ಬ ವ್ಯಕ್ತಿಯನ್ನು ಅಪರಾಧಿ ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಕಾಯಾರ್ಂಗದ ಪ್ರತಿನಿಧಿಗಳು ಒಬ್ಬ ವ್ಯಕ್ತಿಯನ್ನು ಅಪರಾಧಿ ಎಂದು ಘೋಷಿಸಲು ಸಾಧ್ಯವಿಲ್ಲ. ಕೇವಲ ಆರೋಪವನ್ನು ಆಧರಿಸಿ, ಅವನ ಮನೆಯನ್ನು ಕೆಡವಿದರೆ, ಅದು ಕಾನೂನಿನ ಮೂಲ ತತ್ವಕ್ಕೆ ಧಕ್ಕೆ ಉಂಟು ಮಾಡುತ್ತದೆ. ಕಾಯಾರ್ಂಗದ ಪ್ರತಿನಿಧಿಗಳು ನ್ಯಾಯಾಧೀಶರಾಗಲು ಮತ್ತು ಆರೋಪಿಯ ಆಸ್ತಿಯನ್ನು ಕೆಡವುವ ಬಗ್ಗೆ ನಿರ್ಧರಿಸಲು ಸಾಧ್ಯವಿಲ್ಲಎಂದು ಸುಪ್ರೀಂಕೋರ್ಟ್ ಹೇಳಿದೆ










