ಬೂಸ್ಟರ್ ಡೋಸ್ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್.

63
firstsuddi

ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೂಸ್ಟರ್ ಡೋಸ್ ಪಡೆದುಕೊಂಡರು.

ಬಳಿಕ ಮಾತನಾಡಿದ ರಾಜ್ಯಪಾಲರು, ದೇಶದೆಲ್ಲೆಡೆ ಬೂಸ್ಟರ್ ಡೋಸ್ ಲಸಿಕಾ ಅಭಿಯಾನ ನಡೆಯುತ್ತಿದೆ. ಇಂದು ನಾನು ಬೂಸ್ಟರ್ ಡೋಸ್ ಪಡೆದಿದ್ದೇನೆ. ಯಾರ್ಯಾರು ಬೂಸ್ಟರ್ ಡೋಸ್ ಪಡೆಯಲು ಅರ್ಹರು ಇದ್ದೀರೋ ಅವರೆಲ್ಲ ಲಸಿಕೆ ಪಡೆಯಿರಿ. ದೇಶಕ್ಕೆ ಹೋಲಿಸಿದಲ್ಲಿ ಲಸಿಕೆ ವಿಚಾರದಲ್ಲಿ ಕರ್ನಾಟಕ ಮುಂದಿದೆ. ಇದಕ್ಕೆ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ರಾಜ್ಯಪಾಲರು ಹೇಳಿದರು.

ಅಲ್ಲದೇ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ಕೋರಿದರು. ಈ ವೇಳೆ, ರಾಜ್ಯಪಾಲರಿಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸಾಥ್ ನೀಡಿದರು.