ಮುಂಬೈ : ಇಂದು ಮುಂಜಾನೆ ಮುಂಬೈನ ವೆಸ್ಟರ್ನ್ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಐಷಾರಾಮಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಅದೇ ದಾರಿಯಲ್ಲಿ ಸಂಚರಿಸುತ್ತಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಮ್ಮ ಕಾರು ನಿಲ್ಲಿಸಿ, ಅವರ ಸಹಾಯಕ್ಕಾಗಿ ಧಾವಿಸಿದ್ದಾರೆ. ಜೊತೆಗೆ ಕಾರು ಚಾಲಕನ ಜೊತೆ ಕೆಲ ಹೊತ್ತು ಮಾತನಾಡಿದ್ದಾರೆ.
ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಿಎಂ ಶಿಂಧೆ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.










