ಮೈಸೂರು : ಖಾಸಗಿ ಶಾಲೆಯ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಖಾಸಗಿ ಶಾಲಾ ಆವರಣದಲ್ಲಿ ನಡೆದಿದೆ.
ಮಕ್ಕಳನ್ನು ಕೆಳಗಿಳಿಸಿ ಶಾಲಾ ಆವರಣದಲ್ಲಿ ಬಸ್ ನಿಲ್ಲಿಸಲಾಗಿತ್ತು. ಈ ಕಾರಣದಿಂದ ಭಾರೀ ದುರಂತ ತಪ್ಪಿದಂತಾಗಿದೆ. ಒಂದು ಬಸ್ ಸಂಪೂರ್ಣ ಸುಟ್ಟುಹೋಗಿದ್ದು, ಕೆಲವು ಬಸ್ ಗಳಿಗೆ ಭಾಗಶಃ ಬೆಂಕಿ ತಗುಲಿದೆ. ಬೆಂಕಿ ತಗಲುತ್ತಿದ್ದಂತೆ ಅಕ್ಕ ಪಕ್ಕ ನಿಲ್ಲಿಸಿದ್ದ ಬಸ್ ಗಳ ತೆರವು ಮಾಡಲಾಗಿದೆ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸದ್ಯ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










