ಬೆಂಗಳೂರು: ಬೆಂಗಳೂರಿನಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆಯೇ ಧಾರಾಕಾರ ಮಳೆ ಸುರಿಯಿತು. ಬೆಂಗಳೂರಿನ ಮೆಜೆಸ್ಟಿಕ್, ಕಾರ್ಪೊರೇಷನ್ ಸರ್ಕಲ್, ಶಾಂತಿನಗರ, ಕೆ.ಆರ್.ಮಾರ್ಕೆಟ್, ವಿಧಾನಸೌಧ, ಶಿವಾಜಿನಗರ, ಬಸವನಗುಡಿ, ಜಯನಗರ, ಶ್ರೀನಗರ, ಹನುಮಂತನಗರ, ತ್ಯಾಗರಾಜನಗರ, ಕೋರಮಂಗಲ, ರಿಚ್‍ಮಂಡ್ ಸರ್ಕಲ್, ಮಲ್ಲೇಶ್ವರಂ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ದಾಸರಹಳ್ಳಿ, ರಾಜಾಜಿನಗರ ಸೇರಿದಂತೆ ಸುತ್ತಮುತ್ತ ಧಾರಾಕಾರ ಮಳೆಯಾಯಿತು.
ಮಕ್ಕಳು ಮತ್ತು ಉದ್ಯೋಗಿಗಳು ತುಂತುರು ಮಳೆಯಲ್ಲಿಯೇ ನೆನೆದುಕೊಂಡು ಸ್ಕೂಲ್, ಕಾಲೇಜು, ಕೆಲಸಕ್ಕೆ ಹೋಗುತ್ತಿದ್ದಾರೆ. ಕಾರ್ಪೊರೇಷನ್ ಸರ್ಕಲ್ ಸುತ್ತಮುತ್ತ ತುಂತುರು ಮಳೆ ಇನ್ನೂ ಸುರಿಯುತ್ತಿದ್ದು, ಮಳೆಗೆ ವಾಹನ ಸವಾರರು, ಪಾದಚಾರಿಗಳು ಪರದಾಟಪಡುವಂತಾಗಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಕಚೇರಿಗೆ ತೆರಳುವವರಿಗೆ ಮಳೆ ರಗಳೆಯಾಗಿದೆ.










