ಬೆಂಗಳೂರು : ರಾಜ್ಯದಲ್ಲಿ ಧರ್ಮ ದಂಗಲ್ ಮತ್ತೆ ಆರಂಭವಾಗಿದ್ದು , ಬೆಂಗಳೂರಿಗೂ ಕಾಲಿಟ್ಟಿದೆ. ಬೆಂಗಳೂರಿನ ಸಜ್ಜನ್ ರಾವ್ ಸರ್ಕಲ್ ಬಳಿಯಿರುವ ವಿವಿ ಪುರಂನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬೆಳ್ಳಿ ತೇರು ಜಾತ್ರೆಯಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಬಿಬಿಎಂಪಿ ಕಮಿಷನರ್ ಹಾಗೂ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.
ದೂರಿನಲ್ಲೇನಿದೆ?
ಮುಸ್ಲಿಮರ ಉರುಸ್ ಗಳಲ್ಲಿ ಹಿಂದೂ ವ್ಯಾಪಾರಿಗಳಿಗೆ ಅವಕಾಶ ನೀಡುವುದಿಲ್ಲ. ದೇಶದ ಕಾನೂನಿಗೆ ಬೆಲೆ ಕೊಡುವುದಿಲ್ಲ. ಮೂರ್ತಿ ಪೂಜೆಯನ್ನು ಇವರು ನಂಬುತ್ತಿಲ್ಲ. ಹಿಂದೂ ದೇವರನ್ನು ವಿಕೃತಗೊಳಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಾರೆ. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ, ನಮ್ಮ ಆಚರಣೆಗಳಲ್ಲಿ ನಂಬಿಕೆ ಇಲ್ಲದವರಿಗೆ ಹಿಂದೂ ಹಬ್ಬದಲ್ಲಿ ವ್ಯಾಪಾರ ಮಾಡಲು ಯಾವ ಅರ್ಹತೆ ಕೂಡ ಇಲ್ಲ. ಇವುಗಳನ್ನು ಪರಿಗಣಿಸಿ ಹಿಂದೂಯೇತರರಿಗೆ ಬೆಳ್ಳಿ ತೇರಿನ ಜಾತ್ರೆಯ ಸಂದರ್ಭದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿವೆ.










