ಬೆಂಗಳೂರು : ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿಗೆ ಆಗಮಿಸಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದ್ದು, ಅಭಿಮಾನಿಗಳು ಡಿ.ಕೆ. ಶಿವಕುಮಾರ್ ಅವರಿಗೆ ಹೂವಿನ ಹಾರವನ್ನು ಹಾಕಿ, ಡಿಕೆಶಿ ಪರ ಘೋಷಣೆಗಳನ್ನು ಕೂಗಿ ಅವರನ್ನು ಹೆಗಲ ಮೇಲೆ ಹೊತ್ತು ಸಂಭ್ರಮದಿಂದ ಬರಮಾಡಿಕೊಂಡರು.










