ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಇಬ್ಬರು ವೃದ್ಧೆಯರು ಬಲಿ…

127
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಬೆಂಗಳುರಿನಲ್ಲಿ ಇಬ್ಬರು ವೃದ್ಧೆಯರು ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಕೊರೊನಾ ಸೋಂಕಿತ ವೃದ್ಧೆಯರು ಮೃತಪಟ್ಟಿದ್ದಾರೆ. ಇಬ್ಬರೂ ಸೋಂತರನ್ನು ಕಳೆದ ಕೆಲವು ದಿನಗಳ ಹಿಂದೆ ಸೆಂಟ್ ಫಿಲೋಮಿನಾ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಇಬ್ಬರೂ ಮೃತಪಟ್ಟಿದ್ದಾರೆ.