ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್‍ನಿಂದ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಬೆಂಗಳೂರಿನಲ್ಲಿ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಸೋಂಕಿತರು ಕೊರೊನಾ ವೈರಸ್‍ಗೆ ಬಲಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕು ತಗುಲಿರುವುದು ದೃಢವಾದ ಬಳಿಕ ಇಬ್ಬರು ಬೌರಿಂಗ್ ಆಸ್ಪತ್ರೆಯಿಂದ ಹಾಗೂ ಮತ್ತಿಬ್ಬರು ರಾಜೀವ್ ಗಾಂಧಿ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಆಗಿದ್ದರು. ಬಳಿಕ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಾಲ್ವರು ಸೋಂಕಿತರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.










