ಬೆಂಗಳೂರು : ಕೇರಳ ಮೂಲದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅನಗೇಶ್ ಮತ್ತು ಎಂ ಡಿ ಫರೀಸ್ ಬಂಧಿತ ಆರೋಪಿಗಳೆಂದು ಗುರುತಿಸಲಾಗಿದ್ದು, ಬಂಧಿತರಿಂದ 1.3 ಲೀಟರ್ ಮಾದಕ ದ್ರವ್ಯ, 2 ಕೆ.ಜಿ ಗಾಂಜಾ ಸೇರಿ 12 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇಬ್ಬರು ಆರೋಪಿಗಳ ವಿರುದ್ಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನೂ ತೀವ್ರ ವಿಚಾರಣೆಗೆ ಒಳಪಡಿಸಿರುವ ಸಿಸಿಬಿ ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.










