ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು – 5 ದಿನ ಅನ್ನ-ನೀರಿಲ್ಲದೆ ಬದುಕಿದ ಕಂದಮ್ಮ…

68
firstsuddi

ಬೆಂಗಳೂರು : ಶಾಸಕ, ಪತ್ರಿಕೆಯ ಸಂಪಾದಕ ಹಲ್ಲೆಗೆರೆ ಶಂಕರ್ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ.

ಬ್ಯಾಡರಹಳ್ಳಿಯ ಚೇತನ್ ಸರ್ಕಲ್ 4ನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ಶಂಕರ್ ಎಂಬುವವರ ಕುಟುಂಬಸ್ಥರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರುವ ಅನುಮಾನವಿದೆ.

ಶಂಕರ್ ಪತ್ನಿ ಭಾರತಿ(50), ಮಗಳು ಸಿಂಚನ(33), 2ನೇ ಮಗಳು ಸಿಂಧುರಾಣಿ (30), ಮಗ ಮಧುಸಾಗರ್(27) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 9 ತಿಂಗಳ ಮಗು ಹಸಿವಿನಿಂದ ಪ್ರಾಣ ಬಿಟ್ಟಿದೆ. ಮನೆಯಲ್ಲಿ ಪ್ರತಿದಿನ ಗಲಾಟೆ ನಡೆಯುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದ್ದು, ಐದು ದಿನದ ಹಿಂದೆಯೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ದೊರೆತಿವೆ.

ಅದೃಷ್ಟವಶಾತ್ ಸಿಂಚನಾ ಅವರ 3 ವರ್ಷದ ಮಗು ಬದುಕುಳಿದಿದೆ. 5 ದಿನಗಳಿಂದ ಆಹಾರವಿಲ್ಲದೆ ನಿತ್ರಾಣವಾಗಿದ್ದ ಮಗುವನ್ನ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಿಗಳರ ಪಾಳ್ಯದ ಎರಡನೇ ಮಹಡಿಯಲ್ಲಿ ವಾಸವಾಗಿದ್ದ ಮನೆ ದೊಡ್ಡದಾಗಿದ್ದರಿಂದ ಮಗುವಿನ ಚೀರಾಟ ನೆರೆಹೊರೆ ಮನೆಯವರಿಗೂ ಗೊತ್ತಾಗಿಲ್ಲ.

ಶಂಕರ್ ತಮ್ಮ ನಿವಾಸದಿಂದ ಭಾನುವಾರ ತೆರಳಿದ್ದು, ಭಾನುವಾರ ಅಥವಾ ಸೋಮವಾರ ಕುಟುಂಬಸ್ಥರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಹಲ್ಲೆಗೆರೆ ಶಂಕರ್ ನಿನ್ನೆ ಸಂಜೆ 4.30 ರಿಂದ 5 ಗಂಟೆ ಸುಮಾರಿಗೆ ಮನೆ ಬಳಿಗೆ ಬಂದಿದ್ದಾರೆ. ಮನೆ ಬಳಿ ವಾಸನೆ ಬರ್ತಾ ಇದ್ದಿದ್ದರಿಂದ ಪಕ್ಕದ ಮನೆಯವರಿಗೆ ಯಾರಾದ್ರೂ ಹೊರಬಂದಿದ್ದರಾ ಎಂದು ವಿಚಾರಿಸಿದ್ದರು. ಮನೆಯಿಂದ ದುರ್ವಾಸನೆ ಬರ್ತಾ ಇದ್ದಿದ್ದರಿಂದ ಪೊಲೀಸರಿಗೆ ಮಾಹಿತಿ ನೀಡುವಂತೆ ಪಕ್ಕದ ಮನೆಯ ನಿವಾಸಿ ಪರಮೇಶ್ ತಿಳಿಸಿದ್ದಾರೆ.

ಅದರಂತೆ ಸಂಜೆ 5.10ಕ್ಕೆ ಶಂಕರ್ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಸಂಜೆ 5.20ಕ್ಕೆ ಬಂದ ಬೀಟ್ ಪೊಲೀಸರಿಗೆ ಹಾಲ್ ನಲ್ಲಿ ಶಂಕರ್ ಪತ್ನಿ ಭಾರತಿ ಮೃತದೇಹ ಕಂಡಿದ್ದು, ಪೊಲೀಸರು ಇನ್ಸ್ ಪೆಕ್ಟರ್ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಬ್ಯಾಡರಹಳ್ಳಿ ಠಾಣೆ ಇನ್ಸ್ ಪೆಕ್ಟರ್ 6ರಿಂದ 6.30 ಸುಮಾರಿಗೆ ಬಂದು ಬಾಗಿಲು ಒಡೆದು ಮನೆ ಒಳಗೆ ಹೋಗಿದ್ದಾರೆ. ಅಷ್ಟರಲ್ಲಾಗಲೇ ಸಾಲು ಸಾಲು ಮೃತದೇಹ ಕಂಡಿದೆ.