ಬೆಂಗಳೂರಿನಲ್ಲಿ ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್…

57
firstsuddi

ಬೆಂಗಳೂರು : ನಗರದಲ್ಲಿ ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್ ನೀಡಿದೆ. ಚಿನ್ನದ ವ್ಯಾಪಾರಿಗಳ ಮನೆ, ಜ್ಯುವೆಲ್ಲರಿ ಶಾಪ್ ಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ತೆರಿಗೆ ವಂಚನೆ ಆರೋಪ ಹಿನ್ನೆಲೆ ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆ ಸೇರಿದಂತೆ ನಗರದ 25ಕ್ಕೂ ಹೆಚ್ಚು ಜ್ಯುವೆಲ್ಲರಿ ಶಾಪ್ ಗಳ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.

ದಾಳಿ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆಗಾಗಿ ಸಿಎಆರ್ ಸಿಬ್ಬಂದಿಯನ್ನು ಕೂಡ ಐಟಿ ಅಧಿಕಾರಿಗಳು ನಿಯೋಜಿಸಿಕೊಂಡಿದ್ದಾರೆ.