ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಇಬ್ಬರು ಕಾರ್ಮಿಕರು ಬಲಿ…

48
firstsuddi

ಬೆಂಗಳೂರು : ನಗರದಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ.

ಮೃತರನ್ನು ಬಿಹಾರ ಮೂಲದ ದೇವ್ ಭರತ್ ಹಾಗೂ ಉತ್ತರ ಪ್ರದೇಶದ ಅಂಕಿತ್ ಕುಮಾರ್ ಅಂತ ಗುರುತಿಸಲಾಗಿದೆ. ಉಲ್ಲಾಳ ಉಪನಗರದ ಉಪಕಾರ್ ಲೇಔಟ್ ಬಳಿ ಕಾವೇರಿ ನೀರಿನ 5 ಹಂತದ ಪೈಪ್ ಲೈನ್ ಕಾಮಗಾರಿಯಲ್ಲಿ ಮೂವರು ಕಾರ್ಮಿಕರು ತೊಡಗಿದ್ದರು. ರಾತ್ರಿ ಏಳು ಗಂಟೆ ವೇಳೆಗೆ ಮಳೆ ಜಾಸ್ತಿಯಾಗಿದ್ದರಿಂದ ಪೈಪ್ ನೊಳಗೆ ಕೆಲಸ ಮಾಡುವಾಗ ಏಕಾಏಕಿ ನೀರು ತುಂಬಿಕೊಂಡಿದೆ. ಓರ್ವ ಕಾರ್ಮಿಕ ಪಾರಾಗಿದ್ದಾನೆ. ಆದರೆ ಇಬ್ಬರು ಅಲ್ಲಿಂದ ಹೊರಕ್ಕೆ ಬರಲಾಗದೇ, ಉಸಿರು ಕಟ್ಟಿ ಮೃತಪಟ್ಟಿದ್ದಾರೆ.

ಇನ್ನು ಇಬ್ಬರು ಕಾರ್ಮಿಕರ ಸಾವಿಗೆ ಸಂಬಂಧಿಸಿದಂತೆ ಇಬ್ಬರು ಗುತ್ತಿಗೆದಾರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.