ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ.. ಕೇರಳ ಮೂಲದ ಯುವತಿ ಮೇಲೆ ಗ್ಯಾಂಗ್ ರೇಪ್…

58
firstsuddi

ಬೆಂಗಳೂರು : ಕೇರಳ ಮೂಲದ ಯುವತಿ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ನೀಲಾದ್ರಿ ನಗರದ ಬಳಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಯುವತಿ ದೂರಿನ ಮೇರೆಗೆ ಗ್ಯಾಂಗ್ ರೇಪಿಸ್ಟ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಿಟಿಎಂ ಲೇಔಟ್ ನ ಸಂಸ್ಥೆಯೊಂದರಲ್ಲಿ ಫ್ರೀಲ್ಯಾನ್ಸರ್ ಆಗಿ ಯುವತಿ ಕೆಲಸ ಮಾಡುತ್ತಿದ್ದಾಳೆ. ಹೀಗಾಗಿ ಕೆಲಸ ಮುಗಿದ ಬಳಿಕ ಗುರುವಾರ ರಾತ್ರಿ ಬಿಟಿಎಂ ಲೇಔಟ್ ನಿಂದ ನೀಲಾದ್ರಿ ನಗರಕ್ಕೆ ರ‍್ಯಾಪಿಡೋ ಬೈಕ್ ಬುಕ್ಕಿಂಗ್ ಮಾಡಿದ್ದಳು. ಬೈಕ್ ಹುಡುಗ ಪಿಕ್ ಅಪ್ ವೇಳೆ ಯುವತಿ ಮದ್ಯಪಾನ ಮಾಡಿದ್ದಳು. ನೀಲಾದ್ರಿ ನಗರ ತಲುಪುವ ಹೊತ್ತಿಗೆ ಅರೆ ಪ್ರಜ್ಞಾವಸ್ಥೆಯಲ್ಲಿದ್ದಳು.

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ರ‍್ಯಾಪಿಡೋ ಯುವಕ ಡ್ರಾಪ್ ಪಾಯಿಂಟ್ ನಲ್ಲಿ ಬಿಡಲಿಲ್ಲ. ಅಲ್ಲದೆ ಆತ ತನ್ನ ಸ್ನೇಹಿತನನ್ನು ಕೂಡ ಸ್ಥಳಕ್ಕೆ ಕರೆಸಿಕೊಳ್ಳುತ್ತಾನೆ. ನಂತರ ಇಬ್ಬರು ನೀಲಾದ್ರಿ ನಗರದ ತನ್ನ ರೂಮ್ ಗೆ ಕರೆದೊಯ್ದು ಯುವತಿ ಮೇಲೆ ಅತ್ಯಾಚಾರ ಮಾಡಿದ್ದಾರೆ. ಪ್ರಜ್ಞೆ ಬಂದ ಬಳಿಕ ಯುವತಿಯನ್ನು ಬಿಟ್ಟು ಕಳುಹಿಸಿದ್ದಾರೆ. ಅಲ್ಲದೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಘಟನೆ ಬಳಿಕ ಯುವತಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ದೂರು ನೀಡಿದ್ದಳು. ದೂರು ಆಧರಿಸಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.