ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‍ಗೆ ಅಶ್ಲೀಲ ಪದ ಬಳಸಿದ ಆರೋಪದ ಮೇಲೆ ಬಂಧನವಾಗಿದ್ದ ಬಿಜೆಪಿ ಎಂಎಲ್‍ಸಿ ಸಿ.ಟಿ ರವಿಗೆ ನ್ಯಾಯಾಲಯ ಜಾಮೀನು ನೀಡಿದೆ. ಈ ಬೆನ್ನಲ್ಲೇ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ ಸಿಕ್ಕಿದೆ. ಕಾರ್ಯಕರ್ತರು ಪಟಾಕಿ ಸಿಡಿಸಿ, ಹಾರ ಹಾಕಿ ಅದ್ಧೂರಿ ಸ್ವಾಗತದೊಂದಿಗೆ ಬರಮಾಡಿಕೊಂಡಿದ್ದಾರೆ. ಸಿ.ಟಿ ರವಿ ಅವರನ್ನ ಹೆಗಲ ಮೇಲೆ ಹೊತ್ತು ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಇದೇ ವೇಳೆ ಕೈ ಮುಗಿದು ಧನ್ಯವಾದ ಹೇಳಿರುವ ಸಿ.ಟಿ ರವಿಗೆ, ನಿಮ್ಮೊಂದಿಗೆ ನಾವಿದ್ದೇವೆ, ಹೆದರಬೇಡಿ ಅಭಯ ನೀಡಿದ್ದಾರೆ. ಅದಕ್ಕೆ ಪ್ರತಿಯಾಗಿ ರವಿ, ನೀವೆಲ್ಲ ನನಗೆ ಧೈರ್ಯ ತುಂಬಿದ್ದೀರಿ, ಎಲ್ಲವನ್ನೂ ಮಾತನಾಡೋಣ, ತುಂಬಾ ಧನ್ಯವಾದ ಎಂದು ಭಾವುಕರಾಗಿದ್ದಾರೆ. 24 ಗಂಟೆ ಪೆÇಲೀಸರ ವಶದಲ್ಲಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೈಕೋರ್ಟ್ ಆದೇಶದಡಿ ಬಿಡುಗಡೆ ಆಗಿದ್ದೇ ತಡ ಚಿಕ್ಕಮಗಳೂರು ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಬಿಜೆಪಿ ಕಾರ್ಯಕರ್ತರು ಡ್ರಮ್ ಸೆಟ್ ಶಬ್ಧಕ್ಕೆ ರಸ್ತೆ-ರಸ್ತೆಯಲ್ಲಿ ಕುಣಿದು-ಕುಪ್ಪಳಿಸಿ ಸಂಭ್ರಮಿಸಿದರು. ಸುಳ್ಳು ಕೇಸ್ ಸೋಲ್ತು… ಸತ್ಯ ಗೆಲ್ತು ಎಂದು ಸಿಹಿ ಹಂಚಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ರು. ಇತ್ತ ಬೇಲ್ ಸಿಕ್ಕ ಮರು ಕ್ಷಣವೇ ಎಂಎಲ್‍ಸಿ ಸಿ.ಟಿ.ರವಿ, ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷ ವಿಜಯೇಂದ್ರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.










