ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ.

36

ಬೆಂಗಳೂರು: ಮಟ ಮಟ ಮಧ್ಯಾಹ್ನ ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿ ನಡೆದಿದೆ. ಸೆಪ್ಟೇಂಬರ್ 21 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ಸೆಪ್ಟೇಂಬರ್ 21 ರಂದು ನಡೆದಿರುವ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಾಳು ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗಾಯಾಳು ಹೇಳಿಕೆ ದಾಖಲಿಸಿ ದೂರು ಪಡೆದಿರುವ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಆ್ಯಸಿಡ್ ದಾಳಿಯಲ್ಲಿ ಇದು 2ನೇ ದಾಳಿಯಾಗಿದೆ. ಈ ಹಿಂದೆ ನಡೆದಿದ್ದ ಆ್ಯಸಿಡ್ ದಾಳಿ ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. 2022 ರಲ್ಲಿ ಹಾಡಹಗಲೇ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆದಿತ್ತು. ಆರೋಪಿ ನಾಗ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ. ಯುವತಿ ಮೇಲಿನ ಆ್ಯಸಿಡ್ ದಾಳಿ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆ ಆಗಿತ್ತು. ಆರೋಪಿಯನ್ನು ಬಂಧಿಸುವಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಯಶಸ್ವಿಯಾಗಿದ್ದರು. ಈಗ ಇದೇ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಆ್ಯಸಿಡ್ ದಾಳಿ ನಡೆದಿದೆ. ಇನ್ನು ಆ್ಯಸಿಡ್ ದಾಳಿಯಿಂದಾಗಿ ನಾಗೇಶ್ ಮುಖ ಸಂಪೂರ್ಣ ಸುಟ್ಟಿದೆ. ಮುಖ ಊದಿಕೊಂಡಿದೆ. ಗುಲ್ಬರ್ಗ ಮೂಲದವನಾದ ನಾಗೇಶ್ ಘಟನೆ ಆಗ್ತಿದ್ದಂತೆ ರೂಮ್‍ಮೇಟ್ ಗೆ ವಿಚಾರ ಹೇಳಿದ್ದ. ಫೋನಲ್ಲಿ ಮಾತಾಡಿಕೊಂಡು ಬರ್ತಾ ಇದ್ದೆ, ಈ ವೇಳೆ ಯಾರೊ ಆ್ಯಸಿಡ್ ಹಾಕಿ ಹೋಗಿದ್ದಾರೆ ಎಂದಿದ್ದ. ತಕ್ಷಣ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಾಗುತ್ತಿದೆ.