ಹೈದರಾಬಾದ್ : ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಇಂದು ಬೆಳಗ್ಗೆ 6.15ಕ್ಕೆ ತೆಲಂಗಾಣದ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ (6E897)ವನ್ನು ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ 137 ಪ್ರಯಾಣಿಕರಿದ್ದರು.
ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಹೊರಡಿಸಿದ ಹೇಳಿಕೆ ಪ್ರಕಾರ, ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ವಿಮಾನ ತುರ್ತು ಭೂಸ್ಪರ್ಶದ ಹಿಂದೆ ತಾಂತ್ರಿಕ ದೋಷವಿದೆ ಎಂದು ಹೇಳಲಾಗುತ್ತಿದೆ. ವಿಮಾನದಲ್ಲಿ ಯಾವ ರೀತಿಯ ತಾಂತ್ರಿಕ ದೋಷ ಕಂಡುಬಂದಿದೆ ಎಂಬ ಸಂಪೂರ್ಣ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.










