ಬೆಂಗಳೂರಿನ 15ಕ್ಕೂ ಹೆಚ್ಚು ಕಡೆ ಐಟಿ ದಾಳಿ…

78
firstsuddi

ಬೆಂಗಳೂರು: ನಗರದ 15ಕ್ಕೂ ಹೆಚ್ಚು ಕಡೆ ಇಂದು ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆದಿದೆ.

ನಗರದ ಪ್ರಮುಖ ಉದ್ಯಮಿಗಳು, ಜ್ಯುವೆಲರಿ ಶಾಪ್‌ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಸರ್ಜಾಪುರ ಬಳಿಯ ಮುಳ್ಳೂರು , ಆರ್ ಎಂ.ವಿ ಎಕ್ಸ್ಟೆನ್ಷನ್ , ಬಿಇಎಲ್ ಸರ್ಕಲ್, ಮಲ್ಲೇಶ್ವರಂ, ಡಾಲರ್ಸ್ ಕಾಲೋನಿ ಸೇರಿದಂತೆ 15 ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ.