ಬೆಂಗಳೂರು: ಕರ್ನಾಟಕದಲ್ಲಿ ಜೂನ್ 7ರ ಬೆಳಗ್ಗೆ 6ಗಂಟೆಯವರೆಗೂ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಘೋಷಿಸಿದರು.
ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಬ್ಲಾಕ್ ಫಂಗಸ್ಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಲಾಕ್ಡೌನ್ ವಿಸ್ತರಣೆಯಲ್ಲಿಯೂ ಈಗ ಜಾರಿಯಲ್ಲಿರುವ ಮಾರ್ಗಸೂಚಿಯೇ’ ಮುಂದುವರರೆಯಲಿದೆ ಎಂದು ಅವರು ತಿಳಿಸಿದರು.
ಜನರು ಕಟ್ಟುನಿಟ್ಟಾಗಿ ಲಾಕ್‌ಡೌನ್ ಪಾಲನೆ ಮಾಡಬೇಕು. ಬೆಳಗ್ಗೆ 6ರಿಂದ 10ರವರೆಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಲಾಗುವುದು. ಆದರೆ ಅನಗತ್ಯವಾಗಿ ಓಡಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು.ಸದ್ಯ ಬೆಳಗ್ಗೆ 10 ಗಂಟೆಯ ನಂತರವೂ ಜನರು ಅನಗತ್ಯವಾಗಿ ಓಡಾಡುತ್ತಿರುವುದು ಕಂಡುಬರುತ್ತಿದೆ. ಹೀಗಾದಲ್ಲಿ ಇನ್ನಷ್ಟು ಬಿಗಿಯಾದ ಕ್ರಮ ಕೈಗೊಳ್ಳುವುದು” ಅನಿವಾರ್ಯವಾಗಿರುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು. ಜತೆಗೆ ಕರ್ನಾಟಕ ಲಾಕ್‌ಡೌನ್ ವಿಸ್ತರಣೆಯ ನಿರ್ಧಾರವನ್ನು ಹಿರಿಯ ಸಚಿವರ ಜೊತೆ ಚರ್ಚೆ ಮಾಡಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.










