ಬೆಂಗಳೂರು : ಇಂದು ಮಧ್ಯಾಹ್ನ 12 ಗಂಟೆಗೆ ರಾಜ್ಯ ಬಜೆಟ್ ಮಂಡಿಸಲಿರುವ ಸಿಎಂ ಯಡಿಯೂರಪ್ಪ.

107
Firstsuddi

ಬೆಂಗಳೂರು : ಹಣಕಾಸು ಖಾತೆ ಹೊಂದಿರುವ ಸಿಎಂ ಯಡಿಯೂರಪ್ಪನವರು ಇಂದು ಮಧ್ಯಾಹ್ನ 12 ಗಂಟೆಗೆ 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಮಂಡಿಸುವುದಾಗಿ ಟ್ವೀಟ್ ಮಾಡಿದ್ದಾರೆ.

ಇನ್ನು ಬಿ.ಎಸ್. ಯಡಿಯೂರಪ್ಪನವರು 8ನೇ ಬಾರಿಗೆ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಕೊಡಲಿದ್ದಾರೆ. ಕೊರೊನಾ ನಂತರ ಮಂಡನೆಯಾಗುತ್ತಿರುವ ಮೊದಲ ಬಜೆಟ್ ನಲ್ಲಿ ಏನೆಲ್ಲಾ ಯೋಜನೆಗಳಿರಲಿದೆ ಎನ್ನುವ ಕುತೂಹಲಕ್ಕೆ ನಾಳೆ ತೆರೆ ಬೀಳಲಿದೆ.