ಬೆಂಗಳೂರು: ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಾಯಿ.

29
firstsuddi

ಬೆಂಗಳೂರು: ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ನಗರದ ಜಾಲಹಳ್ಳಿಯಲ್ಲಿ ನಡೆದಿದೆ.

ಲಕ್ಷ್ಮೀ (9), ಗೌತಮ್ (7) ಕೊಲೆಯಾದ ಮಕ್ಕಳು. ಗಂಗಾದೇವಿ ಕೊಲೆ ಮಾಡಿರುವ ಆರೋಪಿ ತಾಯಿಯಾಗಿದ್ದು, ದಿಂಬಿನಿಂದ ಉಸಿರುಗಟ್ಟಿಸಿ ಕೊಂದಿದ್ದಾಳೆ ಎನ್ನಲಾಗಿದೆ.

ಮೂಲತಃ ಆಂಧ್ರ ಮೂಲದವರಾದ ಗಂಗಾದೇವಿ ಕುಟುಂಬ, ಬೆಂಗಳೂರಿನ ಜಾಲಹಳ್ಳಿಯಲ್ಲಿ ವಾಸವಾಗಿದ್ದರು. ಆರೋಪಿ ಗಂಗಾದೇವಿ ಖಾಸಗಿ ಕಂಪನಿಯೊಂದರ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯ ಪತಿ ಪೋಕ್ಸೊ ಪ್ರಕರಣವೊಂದರಲ್ಲಿ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಪತಿ ಮಗಳ ಜೊತೆಗೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಪತ್ನಿ ಗಂಗಾದೇವಿ ಖುದ್ದು ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

ಇನ್ನೂ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಆರೋಪಿ ಗಂಗಾದೇವಿಯನ್ನು ಜಾಲಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.