ಬೆಂಗಳೂರು : ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ…

121
firstsuddi

ಬೆಂಗಳೂರು : ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಗರದ ಹೊಸ ಗುಡ್ಡದಹಳ್ಳಿಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದಿದೆ. ಸ್ಥಳದಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸುತ್ತಿರುವ ಹಿನ್ನೆಲೆ, ಅಕ್ಕ ಪಕ್ಕದಲ್ಲಿ ಇರುವ ಮನೆಗಳಿಗೂ ಬೆಂಕಿ ಹೊತ್ತಿಕೊಳ್ಳುತ್ತಿದ್ದು, ಮನೆಯವರನ್ನು ಸ್ಥಳಾಂತರಿಸಲು ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಅಲ್ಲದೇ ಫ್ಯಾಕ್ಟರಿಯ ಅಕ್ಕ ಪಕ್ಕ ನಿಲ್ಲಿಸಿದ್ದ ವಾಹನಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಹೊತ್ತಿಕೊಂಡಿರುವ ಮಾಹಿತಿ ತಿಳಿಯುತ್ತಿದ್ದ ಬಿಬಿಎಂಪಿ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.