ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ವೈಮಾನಿಕ ಸಮೀಕ್ಷೆ ನಡೆಸಿದ ನಿತಿನ್ ಗಡ್ಕರಿ.

40
firstsuddi

ಬೆಂಗಳೂರು : ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಅಂತಿಮ ಹಂತದ ಕಾಮಗಾರಿ ನಡೆಯುತ್ತಿದೆ. ಹಾಗಾಗಿ ಇಂದು ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ್ ಹಾಗೂ ಸಂಸದ ಮುನಿಸ್ವಾಮಿ ಉಪಸ್ಥಿತರಿದರು.

262 ಕಿಲೋ ಮೀಟರ್ ಉದ್ದದ ಅಷ್ಟಪಥ ಹೆದ್ದಾರಿ ಕಾಮಗಾರಿಯನ್ನು 16, 730 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದೇ ಫೆಬ್ರವರಿ ಇಲ್ಲವೇ ಮಾರ್ಚ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆದ್ದಾರಿಗೆ ಚಾಲನೆ ನೀಡಲಿದ್ದಾರೆ.

ಗಂಟೆಗೆ 120 ಕಿಲೋ ಮೀಟರ್ ವೇಗಕ್ಕೆ ತಕ್ಕಂತೆ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದರಿಂದ ಬೆಂಗಳೂರು ಮತ್ತು ಚೆನ್ನೈ ನಡುವಣ ದೂರ 3000 ಕಿಲೋ ಮೀಟರ್ ನಿಂದ 262 ಕಿಲೋ ಮೀಟರ್ ಗೆ ಕಡಿಮೆಯಾಗಲಿದೆ.