ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ಬೆಸ್ಕಾಂ ಶಾಕ್ ನೀಡಿದೆ. ಇನ್ಮುಂದೆ ವಿದ್ಯುತ್ ಬಿಲ್ ಕಟ್ಟದೇ ಇದ್ದರೆ ಫ್ಯೂಸ್ ಕಿತ್ತುಕೊಂಡು ಹೋಗುವುದಿಲ್ಲ. ಬದಲಾಗಿ ಸಂಪರ್ಕವೇ ಕಡಿತವಾಗಲಿದೆ.
ಬೆಸ್ಕಾಂ ಮೂರು ತಿಂಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಮನೆಯ ವಿದ್ಯುತ್ ಸಂಪರ್ಕದ ಒಪ್ಪಂದವೇ ರದ್ದಾಗಲಿದೆ. ಒಮ್ಮೆ ವಿದ್ಯುತ್ ಸಂಪರ್ಕ ಒಪ್ಪಂದ ರದ್ದುಗೊಂಡರೆ ಪುನಃ ಅರ್ಜಿ ಸಲ್ಲಿಸಿ ಹೊಸ ಕನೆಕ್ಷನ್ ತೆಗೆದುಕೊಳ್ಳಲೇಬೇಕಾಗುತ್ತದೆ.










