ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಟೋಲ್ ಸಂಗ್ರಹ ; ಮೊದಲ ದಿನವೇ ತಾಂತ್ರಿಕ ದೋಷ…

56
firstsuddi

ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ಟೋಲ್ ಸಂಗ್ರಹ ಇಂದಿನಿಂದ ಆರಂಭವಾಗಿದೆ. ಆದರೆ ಟೋಲ್ ಸಂಗ್ರಹ ಪ್ರಾರಂಭವಾದ ಮೊದಲ ದಿನವೇ ತಾಂತ್ರಿಕ ದೋಷ ಕಂಡುಬಂದಿದೆ. ಇದರಿಂದ ವಾಹನ ಸವಾರರು ಬೆಳಗ್ಗೆಯಿಂದಲೇ ಪರದಾಡುವಂತಾಗಿದೆ.

ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹಿಸಲಾಗುತ್ತಿದ್ದು, ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ. ಫಾಸ್ಟ್ ಟ್ಯಾಗ್ ಅಳವಡಿಸಲಾಗಿದ್ದರೂ ಅವು ಕಾರ್ಯನಿರ್ವಹಿಸುತ್ತಿಲ್ಲ. ಕೆಲ ಬೂತ್ ಗಳಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿದೆ. ಹೀಗಾಗಿ ವಾಹನ ಸವಾರರು ಗರಂ ಆಗುತ್ತಿದ್ದಾರೆ. ಸಿದ್ಧತೆ ಮಾಡಿಕೊಳ್ಳದೇ ಯಾಕೆ ಟೋಲ್ ತಗೋತಿರಿ ಅಂತ ಅವಾಜ್ ಹಾಕುತ್ತಿದ್ದಾರೆ.

ಯಾವುದಕ್ಕೆ ಎಷ್ಟು ಶುಲ್ಕ?
ಕಾರು, ಜೀಪ್, ವ್ಯಾನ್ ಗಳಿಗೆ ಏಕಮುಖ ಸಂಚಾರಕ್ಕೆ 135 ರೂ. ಯಾದರೆ, ದ್ವಿಮುಖ ಸಂಚಾರಕ್ಕೆ 205 ರೂ. ಯಾಗುತ್ತದೆ. ಸ್ಥಳೀಯ ವಾಹನಗಳಿಗೆ 70 ರೂ. ಹಾಗೂ ತಿಂಗಳ ಪಾಸ್ 4,525 ರೂ. ಇದೆ. ಲಘು ವಾಹನ, ಮಿನಿಬಸ್ ಗಳಿಗೆ ಏಕಮುಖ ಸಂಚಾರಕ್ಕೆ 220 ರೂ. ಇದ್ದು, ದ್ವಿಮುಖ ಸಂಚಾರಕ್ಕೆ 330 ರೂ. ಇದೆ. ಸ್ಥಳೀಯ ವಾಹನಗಳಿಗೆ 110 ರೂ. ಇದ್ದು, ತಿಂಗಳ ಪಾಸ್ 7,315 ರೂ. ಇದೆ. ಬಸ್ ಹಾಗೂ ಟ್ರಕ್ ಗಳ ಏಕಮುಖ ಸಂಚಾರಕ್ಕೆ 460 ರೂ, ದ್ವಿಮುಖ ಸಂಚಾರಕ್ಕೆ 690 ರೂ. ಇದೆ. ಸ್ಥಳೀಯ ವಾಹನಗಳಿಗೆ 230 ರೂ. ಇದ್ದು, ಮಾಸಿಕ ಪಾಸ್ 15,325 ರೂ. ಇದೆ.

ಸ್ಥಳೀಯ ವಾಹನಗಳಿಗೆ 360 ರೂ. ಹಾಗೂ ತಿಂಗಳ ಪಾಸ್ ಗೆ 24,030 ರೂ. ಇದೆ. ಅತಿ ಗಾತ್ರದ ವಾಹನಗಳ ಏಕಮುಖ ಸಂಚಾರಕ್ಕೆ 880 ರೂ., ದ್ವಿಮುಖ ಸಂಚಾರಕ್ಕೆ 1,315 ರೂ, ಸ್ಥಳೀಯ ವಾಹನಗಳಿಗೆ 440 ರೂ. ಹಾಗೂ ತಿಂಗಳ ಪಾಸ್ಗೆ 29,255 ರೂ. ಇದೆ. ಮೂರು ಆಕ್ಸೆಲ್ ವಾಹನಗಳಿಗೆ ಏಕಮುಖ ಸಂಚಾರಕ್ಕೆ 500ರೂ., ದ್ವಿಮುಖ ಸಂಚಾರಕ್ಕೆ 750 ರೂ. ಸ್ಥಳೀಯ ವಾಹನಗಳಿಗೆ 250 ರೂ. ಹಾಗೂ ತಿಂಗಳ ಪಾಸ್ ಗೆ 16,715 ರೂ. ನಿಗದಿಯಾಗಿದೆ. ಭಾರೀ ನಿರ್ಮಾಣ ವಾಹನಗಳಿಗೆ ಏಕಮುಖ ಸಂಚಾರಕ್ಕೆ 720 ರೂ. ಇದ್ದು, ದ್ವಿಮುಖ ಸಂಚಾರಕ್ಕೆ 1,080 ಇದೆ.