ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಶೇ.22ರಷ್ಟು ಹೆಚ್ಚಳ…

51
firstsuddi

ಮೈಸೂರು : ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಮತ್ತೆ ಏರಿಕೆಗೊಂಡಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶೇ.22ರಷ್ಟು ಟೋಲ್ ದರ ಹೆಚ್ಚಿಸಿದ್ದು, ನಾಳೆಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.

ಪರಿಷ್ಕೃತ ದರ ಹೀಗಿದೆ:
ಕಾರು, ವ್ಯಾನ್ ಹಾಗೂ ಜೀಪ್‍ಗೆ ಏಕಮುಖ ಸಂಚಾರ 165 ರೂ. ನಿಗದಿ (30ರೂ. ಹೆಚ್ಚಳ) ಮಾಡಲಾಗಿದೆ. ದ್ವಿಮುಖ ಸಂಚಾರಕ್ಕೆ 250 ರೂ. (45 ರೂ. ಹೆಚ್ಚಳ), ಲಘು ವಾಹನಗಳು ಹಾಗೂ ಮಿನಿ ಬಸ್‍ಗೆ 270 ರೂ. (50 ರೂ. ಹೆಚ್ಚಳ), ದ್ವಿಮುಖ ಸಂಚಾರ 405 ರೂ. (75 ರೂ. ಹೆಚ್ಚಳ), ಟ್ರಕ್, ಬಸ್ ಹಾಗೂ ಎರಡು ಆಕ್ಸೆಲ್ ವಾಹನ 565 ರೂ. (165 ರೂ. ಹೆಚ್ಚಳ), ದ್ವಿಮುಖ ಸಂಚಾರ 850 ರೂ. (160 ರೂ. ಹೆಚ್ಚಳ), ಮೂರು ಆಕ್ಸೆಲ್ ವಾಣಿಜ್ಯ ವಾಹನಗಳು ಏಕಮುಖ ಸಂಚಾರ 615 ರೂ. (115 ರೂ. ಹೆಚ್ಚಳ), ದ್ವಿಮುಖ ಸಂಚಾರ 925 ರೂ. (225 ರೂ. ಹೆಚ್ಚಳ), ಭಾರಿ ಕಟ್ಟಡ ನಿರ್ಮಾಣ ವಾಹಗನಳು, ಅರ್ಥ್ ಮೂವರ್ಸ್ 4-6 ಆಕ್ಸೆಲ್ ವಾಹನಗಳು 885 ರೂ. (165 ರೂ. ಹೆಚ್ಚಳ), ದ್ವಿಮುಖ ಸಂಚಾರ 1,330 ರೂ. (250 ರೂ. ಹೆಚ್ಚಳ), 7 ಅಥವಾ ಅದಕ್ಕಿಂತ ಎಕ್ಸೆಲ್ ವಾಹನಗಳು 1,080 ರೂ. (200 ರೂ. ಹೆಚ್ಚಳ), ದ್ವಿಮುಖ ಸಂಚಾರ 1,620 ರೂ. (305 ರೂ. ಹೆಚ್ಚಳ) ಮಾಡಲಾಗಿದೆ.

ಟೋಲ್ ಸಂಗ್ರಹ ಆರಂಭವಾದ 17 ದಿನದಲ್ಲೇ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ದರ ಏರಿಕೆ ಮಾಡಿರುವುದಕ್ಕೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಬಗ್ಗೆ ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಹೈವೇ ಅಥಾರಿಟಿ ಪ್ರತೀ ವರ್ಷ ಟೋಲ್ ದರ ಹೆಚ್ಚಿಸುವುದು ಸಾಮಾನ್ಯ. ದೇಶದ ಎಲ್ಲ ಟೋಲ್ ದರಗಳಲ್ಲೂ ಹೆಚ್ಚಳ ಆಗಿದೆ. ಆದರೆ ಮೈಸೂರು-ಬೆಂಗಳೂರು ಹೆದ್ದಾರಿ ಮಾರ್ಚ್ 14 ರಂದು ಪ್ರಾರಂಭ ಆಗಿದೆ. ನಾನು ಈಗಾಗಲೇ ಹೈವೇ ಅಥಾರಿಟಿಯ ಹಿರಿಯ ಅಧಿಕಾರಿಗಳ ಜೊತೆ ಮಾತಾಡಿದ್ದು, ಟೋಲ್ ದರ ಹೆಚ್ಚಳ ನಿರ್ಧಾರ ಪರಾಮರ್ಶೆ ಮಾಡಬೇಕು. ದರ ಯಥಾಸ್ಥಿತಿ ಮುಂದುವರೆಸುವಂತೆ ಮನವಿ ಮಾಡಿದ್ದೇನೆ ಎಂದರು.