ಬೆಂಗಳೂರು : ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ – ಕೆಎಸ್‍ಆರ್‌ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ…

67
firstsuddi

ಬೆಂಗಳೂರು : ನಗರದಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ.

ನಗರದ ಸುಜಾತ ಚಿತ್ರಮಂದಿರದ ಬಳಿ ಈ ಭೀಕರ ಘಟನೆ ನಡೆದಿದೆ. ವನಿತಾ ಹಾಗೂ ಉಮಾ ಅವರಿದ್ದ ದ್ವಿಚಕ್ರ ವಾಹನ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಲಭಾಗಕ್ಕೆ ಚಲಾಯಿಸಿದ್ದರಿಂದ ಹಿಂಬದಿಯಿಂದ ಬರುತ್ತಿದ್ದ ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಉಮಾ ಕಾಲಿನ ಮೇಲೆ ಬಸ್ ಚಕ್ರ ಹತ್ತಿದೆ.

ಉಮಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಜೊತೆಗೆ ವನಿತಾ ಎಂಬಾಕೆಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ ಮಲ್ಲೇಶ್ವರಂ ಸಂಚಾರಿ ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಡಿಸಿಪಿ ಕುಲದೀಪ್ ಜೈನ್ ಮಾತನಾಡಿ, ಬೆಳಗ್ಗೆ ಕೆಎಸ್‍ಆರ್‌ಟಿಸಿ ಬಸ್ ಅಪಘಾತದಿಂದ ತಾಯಿ, ಮಗಳು ಗಾಯಗೊಂಡಿದ್ದಾರೆ. ವಾಹನ ಚಲಾಯಿಸುತ್ತಿದ್ದ ಮಗಳು ವನಿತಾ ಹಾಗೂ ತಾಯಿ ಉಮಾಗೆ ಅಪಘಾತವಾಗಿದೆ. ಹಿಂಬದಿ ಕುಳಿತಿದ್ದ ಉಮಾ ಪರಿಸ್ಥಿತಿ ಗಂಭೀರವಾಗಿದೆ. ಘಟನೆ ಸಂಬಂಧ ಕೆಎಸ್‍ಆರ್‌ಟಿಸಿ ಚಾಲಕನನ್ನ ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.