ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ಪ್ರಕಟ…

262
firstsuddi

ಬೆಂಗಳೂರು : ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಡಿಸೆಂಬರ್ ತಿಂಗಳಿನಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಚುನಾವಣಾ ಆಯೋಗ, ರಾಜ್ಯದಲ್ಲಿ ಒಟ್ಟು 5,762 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದ್ದು, ಡಿ.22 ರಂದು ಮೊದಲ ಹಂತ ಹಾಗೂ ಡಿ.27 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿ. 30ಕ್ಕೆ ಫಲಿತಾಂಶ ಹೊರಬೀಳಲಿದೆ.
ಡಿ. 22ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಡಿ.11 ರಂದು ಅಧಿಸೂಚನೆ ಪ್ರಕಟವಾಗಲಿದೆ. ಡಿ.11 ರಂದು ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿದ್ದು, ಡಿ. 14ರಂದು ನಾಮಪತ್ರ ವಾಪಸ್ ಪಡೆಯಲು ಕಡೇ ದಿನವಾಗಿದೆ. ಡಿ.27 ರಂದು ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಡಿ. 16ರಂದು ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿದ್ದು, ಡಿ.19 ರಂದು ನಾಮಪತ್ರ ವಾಪಸ್ ಪಡೆಯಲು ಕಡೇ ದಿನಾಂಕವಾಗಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರ ಇವಿಎಂ ಮೂಲಕ ಮತದಾನ ನಡೆಯಲಿದ್ದು, ಬೇರೆ ಜಿಲ್ಲೆಗಳಲ್ಲಿ ಬ್ಯಾಲೇಟ್ ಪೇಪರ್ ನಲ್ಲಿ ಮತದಾನ ನಡೆಯಲಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ.