ಬೆಂಗಳೂರು : ರೌಡಿಶೀಟರ್ ನ ಬರ್ಬರ ಹತ್ಯೆ!

61
firstsuddi

ಬೆಂಗಳೂರು : ರೌಡಿಶೀಟರ್ನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜೆ.ಸಿ ಆನಂದ್ (36) ಕೊಲೆಯಾದ ರೌಡಿಶೀಟರ್. ನೆಲಗದರನಹಳ್ಳಿಯ ಶಿವಪುರ ಬಳಿ ರಾತ್ರಿ 8 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಪೀಣ್ಯ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಆನಂದ್ ಮೂರು ದಿನಗಳ ಹಿಂದಷ್ಟೇ ಜೈಲಿನಿಂದ ಹೊರಬಂದಿದ್ದ. ಐದಾರು ಮಂದಿ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.