ಬೆಂಗಳೂರು : ವೀಕೆಂಡ್ ಕರ್ಫ್ಯೂ, ಜನತಾ ಕರ್ಫ್ಯೂ ದೈನಂದಿನ ಕೃಷಿ ಚಟುವಟಿಕೆಗಳಿಗೆ ಅನ್ವಯಿಸುವುದಿಲ್ಲ : ಕೃಷಿ ಸಚಿವ ಬಿ.ಸಿ ಪಾಟೀಲ್.

157
firstsuddi

ಬೆಂಗಳೂರು : ರಾಜ್ಯಾದ್ಯಂತ ನಾಳೆ ವೀಕೆಂಡ್ ಕರ್ಫ್ಯೂ, ಜನತಾ ಕರ್ಫ್ಯೂ ದೈನಂದಿನ ಕೃಷಿ ಚಟುವಟಿಕೆಗಳಿಗೆ ಅನ್ವಯಿಸುವುದಿಲ್ಲ. ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೃಷಿ ಚಟುವಟಿಕೆಗಳಿಗೆ ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ತಿಳಿಸಿದ್ದಾರೆ.

ಇಂದು ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತರಕಾರಿ, ಹೂವು, ಹಣ್ಣು, ಮಾರಾಟ ಮಾಡಲು ಹೋಗುವ ರೈತರಿಗೆ ಆರ್.ಟಿ.ಓ ಹಾಗೂ ಪೊಲೀಸ್ ಇಲಾಖೆ ತೊಂದರೆ ಮಾಡಬಾರದು. ಈಗಾಗಲೇ ಮುಂಗಾರು ಪ್ರಾರಂಭವಾಗಿದ್ದು ಕೃಷಿ ಕಾರ್ಮಿಕರಿಗೆ ಹಾಗೂ ರಸಗೊಬ್ಬರ ಅಂಗಡಿ, ಬಿತ್ತನೆ ಕಾರ್ಯಕ್ಕಾಗಲೀ ಯಾರೂ ಸಹ ತೊಂದರೆಯನ್ನುಂಟು ಮಾಡಬಾರದು. ಕೆಲವು ಕಡೆ ಟ್ರ್ಯಾಕ್ಟರ್ ಸೇರಿದಂತೆ ಕೃಷಿ ಪರಿಕರಗಳನ್ನು ವಶಕ್ಕೆ ಪಡೆದಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಎಲ್ಲಾ ಇಲಾಖೆ ಅಧಿಕಾರಿಗಳು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಕಾರ ನೀಡಬೇಕು. ರೈತರಿಗೆ ಅಧಿಕಾರಿಗಳು ಯಾವುದೇ ನಿರ್ಬಂಧ ಹೇರಬಾರದು ಎಂದರು.