ಬೆಂಗಳೂರು : ಸ್ನೇಹಿತನ ಮೇಲೆ ಸ್ನೇಹಿತನಿಂದಲೇ ಆ್ಯಸಿಡ್ ದಾಳಿ!

55
firstsuddi

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೆಲ ದಿನಗಳ ಹಿಂದಷ್ಟೇ ಭಗ್ನ ಪ್ರೇಮಿಯೊಬ್ಬ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ. ಇದೀಗ ಈ ಘಟನೆ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ಆ್ಯಸಿಡ್ ದಾಳಿ ನಡೆದಿದೆ. ಇಲ್ಲಿ ಸ್ನೇಹಿತನೇ ತನ್ನ ಸ್ನೇಹಿತನ ಮೇಲೆ ಆ್ಯಸಿಡ್ ಎರಚಿದ್ದಾನೆ.

ನಗರದ ಕಬ್ಬನ್‌ಪೇಟೆ 10ನೇ ಕ್ರಾಸ್ ನಲ್ಲಿ ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ ನಡೆದಿದ್ದು, ಪಶ್ಚಿಮ ಬಂಗಾಳ ಮೂಲದ ಜನತಾ ಅದಕ್ ತನ್ನ ಸ್ನೇಹಿತನಿಗೆ ಆ್ಯಸಿಡ್ ಎರಚಿದ್ದಾನೆ. ಜನತಾ ಅದಕ್ ಹಾಗೂ ಸಂತ್ರಸ್ತ ಬೆಳ್ಳಿ ಪಾಲಿಶ್ ಅಂಗಡಿಯಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಆದರೆ ಕಳೆದ ಭಾನುವಾರ ರಾತ್ರಿ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಆರೋಪಿ ಜನತಾ ಅದಕ್, ಡೈಲೂಟೇಡ್ ಸೆಲ್ಫುರಿಕ್ ಆ್ಯಸಿಡ್ ಎರಚಿ ಕ್ರೌರ್ಯ ಮೆರೆದಿದ್ದಾನೆ

ಘಟನೆಯಲ್ಲಿ ಸಂತ್ರಸ್ತನಿಗೆ ಶೇ.30ರಷ್ಟು ಗಾಯವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಹಲಸೂರು ಗೇಟ್ ಠಾಣೆ ಪೊಲೀಸರು, ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.