ಆನೇಕಲ್: ಎಲೆಕ್ಟ್ರಾನಿಕ್ ಸಿಟಿ ಸಮೀಪದ ಸಂಪಿಗೆ ನಗರದ ವಸುಂದರ ಲೇಔಟ್ ನ ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಎರಡು ಫ್ಲ್ಯಾಟ್ ಗಳಿಗೆ ಬೆಂಕಿ ಆವರಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ಹೊರಗೆ ಓಡಿ ಬಂದಿದ್ದಾರೆ. ಹೆಬ್ಬಗೋಡಿಯ ಸಂಪಿಗೆ ನಗರದ ವಸುಂದರ ಲೇ ಔಟ್ ನಲ್ಲಿರುವ ವಿ ಮ್ಯಾಕ್ಸ್ ಅಪಾರ್ಟ್ಮೆಂಟ್ ನಲ್ಲಿ ಘಟನೆ ಜರುಗಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕಾಗಿಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.










