ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆಯ ಲಭ್ಯತೆ ಹೆಚ್ಚಿಸುವುದು ಮತ್ತು ಬೆಲೆ ಏರಿಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ಜೂನ್ 1ರಿಂದ ಅನ್ವಯವಾಗುವಂತೆ ಸಕ್ಕರೆ ರಫ್ತಿನ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ.
ಪ್ರಸಕ್ತ 2021-22ನೇ ಮಾರುಕಟ್ಟೆ ವರ್ಷದಲ್ಲಿ, ಈಗಾಗಲೇ ಸುಮಾರು 90 ಲಕ್ಷ ಮೆಟ್ರಿಕ್ ಟನ್ ಸಕ್ಕರೆ ರಫ್ತುಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಸುಮಾರು 82 ಲಕ್ಷ ಮೆಟ್ರಿಕ್ ಟನ್ ಸಕ್ಕರೆಯನ್ನು ರಫ್ತು ಮಾಡಲು ಸಕ್ಕರೆ ಕಾರ್ಖಾನೆಗಳಿಂದ ರವಾನಿಸಲಾಗಿದೆ. ಮತ್ತು 78 ಲಕ್ಷ ಮೆಟ್ರಿಕ್ ಟನ್ ರಫ್ತು ಮಾಡಲಾಗಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಅತ್ಯಧಿಕ ಪ್ರಮಾಣದ ಸಕ್ಕರೆ ರಫ್ತು ಮಾಡಲಾಗಿದೆ.
ಭಾರತ ವಿಶ್ವದಲ್ಲೇ ಅತಿ ಹೆಚ್ಚು ಸಕ್ಕರೆಯನ್ನು ಉತ್ಪಾದಿಸುತ್ತಿದ್ದು, ಎರಡನೇ ಅತಿ ದೊಡ್ಡ ಸಕ್ಕರೆ ರಫ್ತುದಾರನಾಗಿದೆ.










