ನವದೆಹಲಿ : ಬೆಲೆ ಏರಿಕೆ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಈಗ ದೀಪಾವಳಿ ಹಬ್ಬ ಬಂದಿದೆ. ಬೆಲೆ ಏರಿಕೆ ಉತ್ತುಂಗದಲ್ಲಿದೆ. ಇದು ತಮಾಷೆಯ ವಿಚಾರವಲ್ಲ. ಸಾಮಾನ್ಯ ಜನರ ಪರಿಸ್ಥಿತಿ ಬಗ್ಗೆ ಮೋದಿ ಸರ್ಕಾರ ಸಂವೇದನಾಶೀಲ ಹೃದಯ ಹೊಂದಬೇಕು ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಪೆಟ್ರೋಲ್, ಡೀಸೆಲ್, ಎಲ್ಪಿಜಿ ಬೆಲೆಯಷ್ಟೇ ಅಲ್ಲದೆ, ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿದೆ. ಅದರಲ್ಲೂ ಇಂಧನ ದರದಲ್ಲಿ ಹೆಚ್ಚಳಕಂಡಿದ್ದು, ಸಾಮಾನ್ಯ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.










