ಬೆಳಗಾವಿ : ಇಂದು ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಆಗಮಿಸಿರುವ ಸಚಿವ ಸಿ.ಎನ್ ಅಶ್ವಥ್ ನಾರಾಯಣ ಅವರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ.
ಸಿಎಂ ಎದುರೇ ಸಂಸದ ಡಿ.ಕೆ. ಸುರೇಶ್, ಸಚಿವ ಅಶ್ವತ್ಥ್ ನಾರಾಯಣ ಜಟಾಪಟಿ ಪ್ರಕರಣ ಹಿನ್ನೆಲೆ ಇಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನಲೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇಂದು ವಿಶ್ವೇಶ್ವರ ತಾಂತ್ರಿಕ ವಿವಿಯಲ್ಲಿ ಟೆಕ್ ಭಾರತ್ 2022 ಕಾರ್ಯಕ್ರಮವಿದ್ದು, ಇದರಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಚಿವರು ಆಗಮಿಸಿದ್ದಾರೆ. ಸುಭಾಷ್ ನಗರದಲ್ಲಿ ಸ್ನೇಹಿತ ಸಚಿನ್ ಹಂಜಿ ಮನೆಗೆ ಉಪಹಾರಕ್ಕೆ ತೆರಳಿದ ಸಂದರ್ಭದಲ್ಲಿ ಹಂಜಿ ನಿವಾಸ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಉಪಹಾರ ಬಳಿಕ ವಿಟಿಯುಗೆ ತೆರಳಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಮಧ್ಯಾಹ್ನ ಖಾನಾಪುರಕ್ಕೆ ತೆರಳಲಿದ್ದಾರೆ. ಖಾನಾಪುರದಲ್ಲಿ ವಾಯವ್ಯ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಸಂಜೆ ಬೆಳಗಾವಿ ನಗರಕ್ಕೆ ವಾಪಸ್ ಆಗಲಿದ್ದಾರೆ. ಸಂಜೆ ಖಾಸಗಿ ಕಂಪನಿಗಳ ಸಿಇಒಗಳ ಜೊತೆ ಸಭೆ ನಡೆಸಿ ಹುಬ್ಬಳ್ಳಿಗೆ ತೆರಳಲಿದ್ದು, ರಾತ್ರಿ ಹುಬ್ಬಳ್ಳಿಯಿಂದ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.










