ಬೆಳಗಾವಿಗೆ ಎನ್‌ಸಿಪಿ ಶಾಸಕ ರೋಹಿತ್ ಪವಾರ್ ಗೌಪ್ಯ ಭೇಟಿ…

46
firstsuddi

ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಮಧ್ಯೆಯೇ ಮಹಾರಾಷ್ಟ್ರದ ಎನ್‌ಸಿಪಿ ಶಾಸಕ ರೋಹಿತ್ ಪವಾರ್ ಅವರು ಗೌಪ್ಯವಾಗಿ ಬೆಳಗಾವಿಗೆ ಭೇಟಿ ನೀಡಿ ವಾಪಾಸ್ ಆಗಿದ್ದಾರೆ. ಮಹಾ ವಿಕಾಸ ಅಘಾಡಿ ನಾಯಕರ ಸೂಚನೆ ಮೇರೆಗೆ ರೋಹಿತ್ ಪವಾರ್ ಬೆಳಗಾವಿ ಭೇಟಿ ನೀಡಿದ್ದಾರೆ ಎನ್ನಲಾಗ್ತಿದೆ.

ನಿನ್ನೆ ರಾತ್ರಿ ಕೊಲ್ಲಾಪುರ- ಕುಗನೊಳ್ಳಿ ಮಾರ್ಗವಾಗಿ ಬೆಳಗಾವಿಗೆ ಆಗಮಿಸಿದ್ದ ರೋಹಿತ್ ಪವಾರ್ ಅನಾರೋಗ್ಯಕ್ಕೆ ತುತ್ತಾಗಿರುವ ಎಂಇಎಸ್ ಬೆಳಗಾವಿ ನಗರ ಅಧ್ಯಕ್ಷ ದೀಪಕ್ ದಳವಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಇಂದು ಬೆಳಗ್ಗೆ ಬೆಳಗಾವಿ ತಾಲೂಕಿನ ವಿವಿಧ ಭಾಗಗಳಿಗೆ ರೋಹಿತ್ ಪವಾರ್ ಭೇಟಿ ನೀಡಿದ್ದಾರೆ.

ಅದರಲ್ಲಿ ಪ್ರಮುಖವಾಗಿ ಗಡಿ ಹೋರಾಟದಲ್ಲಿ ಗಲಭೆ ಸೃಷ್ಟಿಸಿ ಗೋಲಿಬಾರ್ ಗೆ ತುತ್ತಾದ 11 ಎಂಇಎಸ್ ಕಾರ್ಯಕರ್ತರ ಹೆಸರಿನಲ್ಲಿ ನಿರ್ಮಿಸಲಾದ ಹಿಂಡಲಗಾ ಗ್ರಾಮದಲ್ಲಿರುವ ಹುತಾತ್ಮ ಸ್ಮಾರಕಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿ ಅಲ್ಲಿಂದ ಯಳ್ಳೂರ ಗ್ರಾಮದಲ್ಲಿರುವ ಮಹಾರಾಷ್ಟ್ರ ಹೈಸ್ಕೂಲ್ ಗೆ ರೋಹಿತ್ ಪವಾರ್ ಭೇಟಿ ನೀಡಿದ್ದಾರೆ. ಎನ್‌ಸಿಪಿ ಶಾಸಕ ರೋಹಿತ್ ಪವಾರ್ಗೆ ಸ್ಥಳೀಯ ಎಂಇಎಸ್ ಕಾರ್ಯಕರ್ತರು ಸಾಥ್ ನೀಡಿದ್ದರು.