ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ – ದಿನಾಂಕ ನಿಗದಿಯಾಗಿಲ್ಲ : ಬೊಮ್ಮಾಯಿ.

126
firstsuddi

ಹುಬ್ಬಳ್ಳಿ : ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಆದರೆ ಅಧಿವೇಶನದ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ಈ ಬಾರಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ನಿಶ್ಚಯಿಸಲಾಗಿದೆ. ಆದರೆ ದಿನಾಂಕ ನಿಗದಿಯಾಗಿಲ್ಲ. ಈ ಕುರಿತಂತೆ ನವೆಂಬರ್ 8ರಂದು ಸಚಿವ ಸಂಪುಟದ ಸಭೆ ಇದೆ. ಆ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದರು.

ಭತ್ತ ಬೆಳೆಯುವ ರಾಯಚೂರು, ಕೊಪ್ಪಳ ಭಾಗ ಸೇರಿದಂತೆ ರಾಜ್ಯದ ರೈತರು ಭತ್ತ ಖರೀದಿ ಕೇಂದ್ರ ಆರಂಭಿಸಿ ಎಂಬ ಬೇಡಿಕೆ ಇತ್ತು. ಭತ್ತ ಖರೀದಿ ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ದೀಪಾವಳಿ ಮುಗಿದ ತಕ್ಷಣ ಭತ್ತ ಖರೀದಿ ಆರಂಭಸಲಾಗುವುದು. ಸರ್ಕಾರವೇ ನೇರವಾಗಿ ಭತ್ತ ಖರೀದಿ ಮಾಡಲಿದೆ ಎಂದು ಸಿಎಂ ತಿಳಿಸಿದರು.