ಬೆಳಗಾವಿಯಲ್ಲಿ ಡಿ-ಫಾರ್ಮಸಿ ವಿದ್ಯಾರ್ಥಿ ಆತ್ಮಹತ್ಯೆ…

69
firstsuddi

ಬೆಳಗಾವಿ : ಡೆತ್‌ನೋಟ್ ಬರೆದಿಟ್ಟು ಡಿ-ಫಾರ್ಮಸಿ ವಿದ್ಯಾರ್ಥಿ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಹರು ನಗರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಇಚಲಕರಂಜಿಯ ಭರತ್ ಪಾಟೀಲ್(21) ನೇಣಿಗೆ ಶರಣಾದ ವಿದ್ಯಾರ್ಥಿ. ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಡಿ-ಫಾರ್ಮಸಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ. ನೆಹರು ನಗರದ ಪಿಜಿಯೊಂದರಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮರಾಠಿ ಭಾಷೆಯಲ್ಲಿ ಮೂರು ಸಾಲು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ, ಎಕ್ಸಾಂ ಟೆನ್ಷನ್ ಹಾಗೂ ಫ್ಯಾಮಿಲಿ ಪ್ರಾಬ್ಲಮ್ನಿಂದ ಈ ನಿರ್ಣಯ ಕೈಗೊಂಡಿದ್ದೇನೆ ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಗುಡ್ ಬಾಯ್ ಅಂತಾ ಬರೆದು ಸಾವಿಗೆ ಶರಣಾಗಿದ್ದಾರೆ. ಎಪಿಎಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.