ಬೆಳಗಾವಿಯಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ…

46
firstsuddi

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.

ಶಿವಮೊಗ್ಗ ವಿಮಾನ ನಿಲ್ದಾಣ ಸೇರಿದಂತೆ ಹಲವು ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಮೋದಿ ಮಧ್ಯಾಹ್ನ 2:35ರ ವೇಳೆಗೆ ಬೆಳಗಾವಿ ಪಿಟಿಎಸ್ ಮೈದಾನಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. ನಂತರ ಮೋದಿ ಕಾರನ್ನು ಏರಿದರು.

ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನಸಾಗರ ಹರ ಹರ ಮೋದಿ ಎಂಬ ಘೋಷಣೆ ಕೂಗಿ ಕಾರಿನ ಮೇಲೆ ಹೂ ಮಳೆ ಸುರಿದರು. ಕಟ್ಟಡಗಳ ಮೇಲೇರಿದ ಜನರು, ಬಿಜೆಪಿ ಭಾವುಟ ಪ್ರದರ್ಶಿಸುತ್ತಾ, ಮೋದಿ ಪರ ಜೈಕಾರ ಹಾಕಿ ಹರ್ಷೋದ್ಗಾರ ಮಾಡಿದರು.

ಕಾಲೇಜ್ ವೃತ್ತದಿಂದ ಕಪಿಲೇಶ್ವರ ದೇವಸ್ಥಾನ ರಸ್ತೆ, ಶಿವಾಜಿ ಗಾರ್ಡನ್, ಯಡಿಯೂರಪ್ಪ ಮಾರ್ಗವಾಗಿ ಮಾಲಿನಿ ಸಿಟಿವರೆಗೂ ಸುಮಾರು 10.7 ಕಿ.ಮೀ ರೋಡ್ ಶೋ ನಡೆಸಿದರು. ರೋಡ್ ಶೋ ಬಳಿಕ ಬೃಹತ್ ಸಮಾವೇಶದಲ್ಲಿ ಮೋದಿ ಪಾಲ್ಗೊಂಡರು.

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತು ಬಿಡುಗಡೆ, ಮೇಲ್ದರ್ಜೆಗೇರಿದ ಬೆಳಗಾವಿ ರೈಲ್ವೇ ನಿಲ್ದಾಣ ಉದ್ಘಾಟನೆ ಸೇರಿದಂತೆ ಹಲವು ಕಾಮಗಾರಿಗಳ ಉದ್ಘಾಟನೆಯನ್ನು ಮೋದಿ ಮಾಡಲಿದ್ದಾರೆ.