ಬೆಳಗಾವಿ ಅಪಘಾತ – ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ

47
firstsuddi

ಬೆಳಗಾವಿ: ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ವಾಹನ ಭೀಕರ ಅಪಘಾತಕ್ಕೀಡಾಗಿ ಆರು ಜನ ಸಾವನ್ನಪ್ಪಿದ್ದರು. ಇದೀಗ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಆರ್.ಟಿ ನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಪ್ರಕರಣದ ತನಿಖೆ ಮಾಡಲು ಕೂಡ ಸೂಚಿಸಲಾಗಿದೆ ಎಂದರು.

ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ತಿಂಗಳಲ್ಲಿ ಲೋಕಾರ್ಪಣೆಗೆ ಮುಂದಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕೆಲಸ ಸಂಪೂರ್ಣವಾದ ನಂತರವೇ ಲೋಕಾರ್ಪಣೆಯಾಗಲಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಇಂದು ಸಂಜೆ ಸಭೆಯಲ್ಲಿ ಚರ್ಚಿಸಿ, ಪರಿಸ್ಥಿತಿ ಪರಿಶೀಲಿಸಿ, ತೀರ್ಮಾನಕ್ಕೆ ಬರಲಾಗುವುದು ಎಂದರು.

ಸ್ಯಾಂಟ್ರೋ ರವಿ ಜೊತೆ ಬಿಜೆಪಿ ನಾಯಕರು ಸಂಪರ್ಕ ದಲ್ಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಯಾಂಟ್ರೋ ರವಿ ಬಗ್ಗೆ ಹೇಳಿರುವುದು, ಅವರು ಯಾರು ಎಂದೂ ನನಗೆ ಗೊತ್ತಿಲ್ಲ ಎಂದರು.